ಉಗ್ರರ ಜತೆ ನಂಟು: ಕಾಶ್ಮೀರದ ಪೊಲೀಸ್‌ ಅಧಿಕಾರಿ ಬಂಧನ

ಉಗ್ರರ ಜತೆ ನಂಟು: ಕಾಶ್ಮೀರದ ಪೊಲೀಸ್‌ ಅಧಿಕಾರಿ ಬಂಧನ

ಜಮ್ಮು ಮತ್ತು ಕಾಶ್ಮೀರದ ಪೊಲೀಸ್‌ ಅಧಿಕಾರಿ ಶೇಖ್ ಆದಿಲ್‌ನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಉಗ್ರರ ಜತೆ ನಂಟು ಹೊಂದಿರುವ ಆರೋಪದ ಮೇಲೆ ಡಿವೈಎಸ್‌ಪಿ ಶೇಖ್ ಆದಿಲ್‌ನನ್ನು ಪೊಲೀಸರು ಬಂಧಿಸಿದ್ದು ಅವರನ್ನು ನ್ಯಾಯಾಲಯ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಕೆಲವು ಉಗ್ರರ ನಿಕಟ ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಬಂಧಿಸಲಾಗಿದೆ. ಶಂಕಿತ ಭಯೋತ್ಪಾದಕರಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂದು ಮಾರ್ಗದರ್ಶನ ನೀಡುತ್ತಿದ್ದ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ಹೇಳಿದ್ದಾರೆ.

ಕೆಲ ಶಂಕಿತ ಉಗ್ರರಿಂದ ಶೇಖ್‌ ಆದಿಲ್‌ ಹಣ ಪಡೆದಿದ್ದ ಎಂದು ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ..

Share this post

Post Comment