ಪ್ರಯಾಣಿಕರ ರೈಲಿನ ಬೋಗಿಯೊಂದಕ್ಕೆ ಆಕಶ್ಮಿಕವಾಗಿ ಬೆಂಕಿ ತಗುಲಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ದೆಹಲಿಯ ಪಟೇಲ್ ನಗರ ರೈಲು ನಿಲ್ದಾಣದಲ್ಲಿ ಮಂಗಳವಾರ ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಿರ್ಸಾ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಪ್ರಯಾಣಿಕರನ್ನು ಕೆಳಗೆ ಇಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಲಾಯಿತು. ತಕ್ಷಣಕ್ಕೆ ಅವರು ಆಗಮಿಸಿ ಬೆಂಕಿ ನಂದಿಸಿದರು ಎಂದು ಪೊಲೀಸರು ಹೇಳಿದ್ದಾರೆ.
ಘಟನೆಯಲ್ಲಿ ರೈಲಿನ ಬೋಗಿಯೊಂದು ಸುಟ್ಟಿದ್ದು ಯಾವುದೇ ಪ್ರಯಾಣಿಕರಿಗೆ ಅನಾಹುತವಾಗಿಲ್ಲ. ಈ ಸಂಬಂಧ ತನಿಖೆಗೆ ಆದೇಶ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ಖಚಿತಪಡಿಸಿದ್ದಾರೆ