ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದಿರುವ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಪ್ರಶ್ನಿಸಲಾದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇದೇ 29ಕ್ಕೆ ನಿಗದಿಪಡಿಸಿದೆ.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಮಧ್ಯಂತರ ಮತ್ತು ಮೂಲ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು. ಅಂತೆಯೇ, ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಸೇರ್ಪಡೆ ಮಾಡಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಡಿಕೆಶಿ ಅಕ್ರಮ ಆಸ್ತಿ ಅರೋಪ ಅರ್ಜಿ: ವಿಚಾರಣೆ ಮುಂದಕ್ಕೆ
