ಕಾಂಗ್ರೆಸ್ ಅವಧಿಯಲ್ಲಿ ರಾಜ್ಯಕ್ಕೆ ಬಂದ ಅನುದಾನ ಮೋದಿ ಅವಧಿಯಲ್ಲಿ ರಾಜ್ಯಕ್ಕೆ ಅನುದಾನದಲ್ಲಿ ಅನ್ಯಾಯವಾಗಿದೆ ಎಂದ ಸಿಎಂಗೆ ಲೆಕ್ಕ ಕೊಟ್ಟ ಬಿಜೆಪಿ
ಕೇಂದ್ರದಿಂದ ನೀಡಬೇಕಾದ ಅನುದಾನದಲ್ಲಿ ಅನ್ಯಾಯವಾಗುತ್ತಿದೆ ಎಂಬ ಬಿಜೆಪಿ ಮಾಡಿದ ಆರೋಪಗಳೇನು?: ತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸದಾ ಆರೋಪಿಸುವುದು ಕೇಂದ್ರ ಸರ್ಕಾರವನ್ನು, ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದಂತಹ ಆಡಳಿತ ವಿರೋಧಿ ಅಲೆ ಸದ್ಯ ಕಾಂಗ್ರೆಸ್ ಸರ್ಕಾರಕ್ಕಿದೆ. ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ಹಗರಣ ಏಣಿಸಿದ ಬಿಜೆಪಿ
ಹಿಂದಿನ ಯುಪಿಎ ಮತ್ತು ನರೇಂದ್ರ ಮೋದಿ ಸರ್ಕಾರ ನೀಡಿರುವ ಅನುದಾನದ ಲೆಕ್ಕಾಚಾರ ನೀಡಿ ಲೆಕ್ಕ ಹಾಕೊಳ್ಳಿ ಎಂದಿದೆ. ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಪಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ವಿಧಾನಸೌಧದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ದಾಳಿ ನಡೆಸಿ, ಪ್ರತಿಭಟನೆ ಘೋಷಿಸಿದ ಬೆನ್ನಿಗೇ ಬಿಜೆಪಿ ತಿರುಗೇಟು ನೀಡಿದ್ದು, ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದೆ ಎಂದು ಬಿಜೆಪಿ ಟ್ವಿಟ್ ಮಾಡಿದೆ. ಜತೆಗೆ ಹಿಂದೆ ಅಧಿಕಾರದಲ್ಲಿದ್ದ ಯುಪಿಎಗಿಂತಲೂ ಹೆಚ್ಚಿನ ಧನಸಹಾಯವನ್ನು ನರೇಂದ್ರ ಮೋದಿ ಸರ್ಕಾರ ನೀಡಿದೆ ಎಂದು ಅಂಕಿ ಅಂಶಗಳ ಮೂಲಕ ತೋರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹೋರಾಟಕ್ಕೆ ವೇದಿಕೆ ಅಣಿಯಾದಂತಾಗಿದೆ.
2004-2014ರ ವರೆಗೆ ಯುಪಿಎ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್ಹ ಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ 81,795 ಕೋಟಿ. ಇದಕ್ಕೆ ಹೋಲಿಸಿದರೆ ಮೋದಿ ಸರ್ಕಾರ ನೀಡಿರುವ 2,82,791 ಕೋಟಿ ಶೇ.245 ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ.
ಇದಲ್ಲದೆ ನಿರ್ದಿಷ್ಟ ಯೋಜನೆಗಳಿಗಾಗಿ ನೀಡಲಾದ ಅಭಿವೃದ್ಧಿ ಹಣ ಅದೆಷ್ಟು ಪಾಲು ಅಧಿಕ ಎಂಬುದನ್ನು ಲೆಕ್ಕ ಹಾಕಲು ಸ್ವಯಂಘೋಷಿತ ಆರ್ಥಿಕ ತಜ್ಞರಾದ ತಮಗೆ ಅಸಾಧ್ಯವಲ್ಲ. ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ
ಬಂದ 60,779 ಕೋಟಿಗಿಂತಲೂ ಮೋದಿ ಸರ್ಕಾರ ನೀಡಿದ 2,08,882 ಕೋಟಿ ಹೆಚ್ಚು ಎಂಬುದನ್ನು ಅರಿಯಲು ಅರ್ಥಶಾಸ್ತ್ರ ಗೊತ್ತಿರಲೇಬೇಕೆಂದು ಇಲ್ಲ, ಲೆಕ್ಕ ಗೊತ್ತಿದ್ದರೂ ಸಾಕು. 2004-2014ರ ವರೆಗೆ ಕರ್ನಾಟಕಕ್ಕೆ ನೀಡಿದ್ದು 81795 ಕೋಟಿ. ಅದರಲ್ಲಿ ರಾಜ್ಯಕ್ಕೆ ಬಂದಿದ್ದು ರಾಜ್ಯಕ್ಕೆ ಬಂದಿದ್ದು 60779 ಕೋಟಿ. ರಾಜ್ಯದಲ್ಲಿ 1947-2014ರ ವರೆಗೆ 6750 ಕಿಮೀ ರಸ್ತೆ ನಿರ್ಮಾಣ ಮೋದಿ ಅವಧಿಯಲ್ಲಿ ರಾಜ್ಯಕ್ಕೆ 282791 ಕೋಟಿ. ಶೇ. 245ರಷ್ಟು ಹೆಚ್ಚು. ಇದರಲ್ಲಿ ರಾಜ್ಯಕ್ಕೆ ಬಂದಿದ್ದು, 208882 ಕೋಟಿ.
2014ರ ನಂತರ ರಾಜ್ಯದಲ್ಲಿ ಒಟ್ಟು 13500 ಕಿಮೀ ರಸ್ತೆ ನಿರ್ಮಾಣ ನಿಮ್ಮೂರಿಗೆ ಒಂದುವರೆ ಗಂಟೆಯಲ್ಲಿ ಹೋಗಲು ಕಾರಣ ಮೋದಿ: ನಮ್ಮ ರಾಜ್ಯದಲ್ಲಿ ನಿಮ್ಮ ಪಕ್ಷದವರು 1947 ರಿಂದ 2014ರ ವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6750 ಕಿಲೋಮೀಟರ್, ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ
ಒಟ್ಟು 13,500 ಕಿಲೋಮೀಟರ್. ಸಿದ್ದರಾಮಯ್ಯನವರೇ, ಮೊದಲು ನಾಲ್ಕು ಗಂಟೆಗೂ ಹೆಚ್ಚು ಸಮಯ ತಗಲುತ್ತಿದ್ದ ನಿಮ್ಮ ತವರೂರಿಗೆ ಕೇವಲ ಒಂದೂವರೆ ಗಂಟೆಯಲ್ಲೇ ನೀವಿಂದು ಹೋಗುತ್ತಿರುವ ಆ ರಸ್ತೆಯನ್ನು ಮಾಡಿಸಿದ್ದೂ ಸಹ ಮೋದಿ ಸರ್ಕಾರವೇ. ವಿದ್ಯುದೀಕರಣದಲ್ಲಿ ಆಗಿರುವ ಬೆಳವಣಿಗೆ ಒಮ್ಮೆ ನೋಡಿ: ಬ್ರಿಟೀಷರು ಭಾರತವನ್ನು ಬಿಟ್ಟು ಹೋದಲ್ಲಿಂದ ಹಿಡಿದು 2014 ರಲ್ಲಿ ಕಾಂಗ್ರೆಸ್ ಅಧಿಕಾರ ಬಿಟ್ಟು ತೊಲಗುವವರೆಗೆ, 67 ವರ್ಷಗಳಲ್ಲಿ ಕರ್ನಾಟಕದಲ್ಲಿ ಆದ ರೈಲ್ವೇ ವಿದ್ಯುದೀಕರಣ ಕೇವಲ 16 ಕಿಲೋಮೀಟರ್, ಆದರೆ ಕಾಂಗ್ರೆಸ್ಸನ್ನು ಉಚ್ಛಾಟಿಸಿ ಬಂದ ಮೋದಿ ಸರ್ಕಾರ ಮಾಡಿದ ರೈಲ್ವೆ ವಿದ್ಯುದೀಕರಣ ಬರೋಬ್ಬರಿ 3265 ಕಿಮೀ.