Category: ನ್ಯೂಸ್

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ: ಸಿಸಿಬಿ ಪೊಲೀಸರಿಂದ ಶೇ 88 ರಷ್ಟು ಮೊತ್ತ ಜಪ್ತಿ!

‘ಪ್ರಕರಣದ ಪ್ರಮುಖ ಆರೋಪಿಗಳಾದ ಚೈತ್ರಾ ಕುಂದಾಪುರ, ಹಿರೇಹಡಗಲಿ ಹಾಲಸ್ವಾಮಿ ಮಠದ ಹಾಲವೀರಪ್ಪ ಸ್ವಾಮೀಜಿ ಹಾಗೂ ಇತರರಿಗೆ ಸೇರಿದ್ದ ಜಾಗಗಳಲ್ಲಿ ನಿರಂತರವಾಗಿ ಶೋಧ ನಡೆಸಲಾಗಿದೆ. ನಗದು, ಚಿನ್ನಾಭರಣ, ಠೇವಣಿ, ಆಸ್ತಿ ದಾಖಲೆಗಳು ಹಾಗೂ ಎರಡು ಕಾರುಗಳನ್ನು ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹ 3.67 ಕೋಟಿ’ ಎಂದು ಸಿಸಿಬಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು. ‘ಉದ್ಯಮಿ ಗೋವಿಂದ…